ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

On: May 19, 2023 3:56 PM
Follow Us:
---Advertisement---

ಶಿವಮೊಗ್ಗ : ಮೆಗ್ಗಾನ್‌ನಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಅಹ್ವಾನಿಸಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in ನ್ನು ಸಂಪರ್ಕಿಸುವುದು. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿ.ಸೂ.: ಈ ಹುದ್ದೆಯು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು. ಯಾವುದೇ ಕಾರಣಕ್ಕೂ ಖಾಯಂ ನೇಮಕಾತಿಯೆಂದು ಪರಿಗಣಿಸುವುದಿಲ್ಲ ಹಾಗೂ ಸರ್ಕಾರಿ ನೌಕರರಿಗೆ ಅನ್ವಯವಾಗುವ ಪಿಂಚಣಿ/ಜಿ.ಪಿ.ಎಫ್/ಪಿ.ಎಫ್. ಇತರೆ ವಿಶೇಷ ರಜೆ ಸೌಲಭ್ಯಗಳು ಅನ್ವಯವಾಗುವುದಿಲ್ಲ.

Join WhatsApp

Join Now

Join Telegram

Join Now